70 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಕಲಾ ಪಯಣ ಕನ್ನಡ ಸಂಘದ ವತಿಯಿಂದ ಕನ್ನಡ ವಿಭಾಗವು ನವೆಂಬರ್ 6 ರಂದು ಕನ್ನಡ ರಾಜ್ಯೋತ್ಸವ ಮತ್ತು ಗ್ರಂಥಾಲಯದಲ್ಲಿ ಕನ್ನಡ ಸಾಹಿತ್ಯ ಪುಸ್ತಕ ಪ್ರದರ್ಶನ ವನ್ನು ಹಮ್ಮಿಕೊಳ್ಳಲಾಗಿದ್ದು ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ಡಾ, ಎಚ್. ಲಕ್ಷ್ಮೀ ನಾರಾಯಣ ಸ್ವಾಮಿ ಕನ್ನಡ ಪ್ರದ್ಯಾಪಕರು,( ಕನ್ನಡ ಅಧ್ಯಯನ ಕೇಂದ್ರ ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ರಾಮನಗರ )ಆಗಮಿಸಿ ಕಾರ್ಯಕ್ರಮ ಕಳೆಗಟ್ಟುವಂತೆ ಮಾಡಿದರು. ಕಾಲೇಜಿನ ನಿರ್ದೇಶಕರಾದ ರಾಲ್ಫ್ ಬೆಸ್ಟೆರ್ ವಿಚ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾ.ಡಾ. ಮರ್ವಿನ್ ಪಾಲ್ ಫ್ರಾಂಕ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ. ವಿಲಿಯಮ್ ಡಿ ಕುನ್ಹ, ಉಪ ಪ್ರಾಂಶುಪಾಲರಾದ ಪ್ರೊ ಸುಷ್ಮಾ ಶ್ರೀ ಮೇಡಂ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ತುಂಬಾ ಸೊಗಸಾಗಿ ಮೂಡಿಬಂದವು.